Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:10
23 ತಿಳಿವುಗಳ ಹೋಲಿಕೆ  

ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.


ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.


ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.


ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.


ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.


ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.


ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು