2 ಅರಸುಗಳು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.