Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:14
19 ತಿಳಿವುಗಳ ಹೋಲಿಕೆ  

ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.


ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.


ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.


ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.


ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು