Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಎಲೀಷನು - ನಾನು ಸನ್ನಿಧಿ ಸೇವೆಮಾಡುತ್ತಿರುವ ಯೆಹೋವನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವದಿಲ್ಲ ಅಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು. ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:16
15 ತಿಳಿವುಗಳ ಹೋಲಿಕೆ  

ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.


ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.


ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು