Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷವಿುಸಲಿ; ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:18
9 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.


ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು