Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:20
33 ತಿಳಿವುಗಳ ಹೋಲಿಕೆ  

ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.


ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.


ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.


ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.


‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.


“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.


ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.


ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,


ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.


ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು