Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:22
21 ತಿಳಿವುಗಳ ಹೋಲಿಕೆ  

ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.


ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.


ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.


ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.


ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.


ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.


ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು