Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾಮಾನನು, “ಆರು ಸಾವಿರ ನಾಣ್ಯವನ್ನಾದರೂ ತೆಗೆದುಕೊಳ್ಳಬಾರದೇ,” ಎಂದು ಅವನನ್ನು ಒತ್ತಾಯಪಡಿಸಿ, ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ, ಆ ಚೀಲಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ, ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾಮಾನನು, “ದಯಮಾಡಿ ಎಪ್ಪತ್ತು ಕಿಲೋಗ್ರಾಂ ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋಗ್ರಾಂ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಆ ಸೇವಕರು ಈ ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:23
9 ತಿಳಿವುಗಳ ಹೋಲಿಕೆ  

ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.


ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.


ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.


ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.


ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.


ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,


ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು