Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:5
21 ತಿಳಿವುಗಳ ಹೋಲಿಕೆ  

ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.


“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.


ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.


ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.


ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.


ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.


“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.


ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.


ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು