2 ಅರಸುಗಳು 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮಾರ್ಯಕ್ಕೆ ಹೊರಟುಹೋಗಿ ಪತ್ರವನ್ನು ಇಸ್ರಾಯೇಲ್ಯರ ಅರಸನಿಗೆ ಕೊಟ್ಟನು. ಅದರಲ್ಲಿ - ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ; ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದೆಂದು ಈ ಪತ್ರದಿಂದ ತಿಳಿದುಕೋ ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.