Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:15
13 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.


ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.


ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.


ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು