Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:17
28 ತಿಳಿವುಗಳ ಹೋಲಿಕೆ  

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.


ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.


ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.


ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.


ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.


ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು