Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:19
7 ತಿಳಿವುಗಳ ಹೋಲಿಕೆ  

ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.


ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು