Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಅರಸನು ಅವರನ್ನು ಕಂಡು ಎಲೀಷನಿಗೆ - ಅಪ್ಪಾ, ನಾನು ಇವರನ್ನು ಸಂಹರಿಸಲೋ ಸಂಹರಿಸಲೋ ಎಂದು ಕೇಳಲು ಅವನು - ಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:21
9 ತಿಳಿವುಗಳ ಹೋಲಿಕೆ  

ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.


ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.


ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.


ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.


ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು