2 ಅರಸುಗಳು 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವಿಯೋ? ಇವರಿಗೆ ಅನ್ನಪಾನಗಳನ್ನು ಕೊಡು; ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು. ಅಧ್ಯಾಯವನ್ನು ನೋಡಿ |