2 ಅರಸುಗಳು 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.