Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:27
11 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ


ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.


“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು