Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಿನಗಿರುವ ದುಃಖ ಯಾವುದು?” ಎಂದನು. ಆಗ ಆಕೆ, “ಈ ಸ್ತ್ರೀ ನನಗೆ, ‘ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ದಿನ ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದು ಹೇಳಿದ್ದರಿಂದ ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನಗಿರುವ ದುಃಖ ಯಾವದು ಎಂದು ಕೇಳಿದನು. ಆಗ ಆಕೆಯು - ಈ ಸ್ತ್ರೀಯು ನನಗೆ - ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ಹೊತ್ತು ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:28
15 ತಿಳಿವುಗಳ ಹೋಲಿಕೆ  

ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,


ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು


ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?


ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?


ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.


ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;


ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು