Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣೀತಟ್ಟು ಇರುವದು ಜನರಿಗೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:30
5 ತಿಳಿವುಗಳ ಹೋಲಿಕೆ  

ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.


ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು