2 ಅರಸುಗಳು 6:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |