Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:5
12 ತಿಳಿವುಗಳ ಹೋಲಿಕೆ  

ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’


ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.


ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.


ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.


ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,


ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು