Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ - ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆಂಬದನ್ನು ಅವರು ಬಲ್ಲರು. ಆದದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:12
4 ತಿಳಿವುಗಳ ಹೋಲಿಕೆ  

“ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.


ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.


ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು