Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಸಿರಿಯಾದವರ ಸೈನ್ಯವೆಲ್ಲಿರುತ್ತದೆಂಬುದನ್ನು ನೋಡಿಬರುವುದಕ್ಕಾಗಿ, ರಾಹುತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ ಅರಾಮ್ಯರ ಸೈನ್ಯವೆಲ್ಲಿರುತ್ತದೆಂಬದನ್ನು ನೋಡಿ ಬರುವದಕ್ಕಾಗಿ ರಾಹುತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೂಡಲೇ ರಾಜನು ಎರಡು ರಥಗಳನ್ನು ತರಿಸಿ ಅರಾಮ್ಯರ ಸೇನೆಯು ಎಲ್ಲಿದೆ ಎಂಬುದನ್ನು ನೋಡಿಕೊಂಡು ಬರುವುದಕ್ಕಾಗಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:14
3 ತಿಳಿವುಗಳ ಹೋಲಿಕೆ  

ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.


ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು