2 ಅರಸುಗಳು 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
15 ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
15 ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
15 ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.