2 ಅರಸುಗಳು 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು. ಅಧ್ಯಾಯವನ್ನು ನೋಡಿ |