Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಂದು ಹೇಳಿ ಬಿಗಿ ಮುಖದಿಂದ, ಸ್ಥಿರದೃಷ್ಟಿಯಿಂದ ಹಜಾಯೇಲನನ್ನೇ ದಿಟ್ಟಿಸಿ ನೋಡಿ ಅಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ನಾಚಿಕೊಳ್ಳುವ ತನಕ ಸ್ಥಿರದೃಷ್ಟಿಯಿಂದ ಅವನನ್ನು ನೋಡಿ ಅಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಜಾಯೇಲನು ನಾಚಿಕೊಳ್ಳುವ ತನಕ ಎಲೀಷನು ಅವನನ್ನು ಒಂದೇ ಸಮನೆ ನೋಡಿದನು. ನಂತರ ದೇವಮನುಷ್ಯನು ಅಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮನುಷ್ಯನಾದ ಎಲೀಷನು ಹಜಾಯೇಲನು ಮುಜುಗರಕ್ಕೆ ಒಳಗಾಗುವವರೆಗೂ ಅವನನ್ನು ದಿಟ್ಟಿಸಿ ನೋಡುತ್ತಿದ್ದನು. ನಂತರ ದೇವರ ಮನುಷ್ಯನು ಅಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:11
15 ತಿಳಿವುಗಳ ಹೋಲಿಕೆ  

ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.


ಯೇಸು ಕಣ್ಣೀರಿಟ್ಟನು.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.


ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು