2 ಅರಸುಗಳು 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಜಾಯೇಲನು ಎಲೀಷನನ್ನು - ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವದು ಹೇಗೆ ಎಂದು ಕೇಳಲು ಅವನು - ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |