Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು, “ಎಲೀಷ ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಇವನು, “ನಿಮಗೆ ಖಂಡಿತವಾಗಿ ಗುಣವಾಗುವುದೆಂದು ಹೇಳಿದರು,” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು - ಎಲೀಷನು ಏನು ಹೇಳಿದನು ಎಂದು ಕೇಳಿದನು. ಅದಕ್ಕೆ ಇವನು - ನಿನಗೆ ಹೇಗೂ ಸ್ವಸ್ಥವಾಗುವದೆಂದು ಹೇಳಿದನು ಎಂಬದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ಹದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದನು. ಹಜಾಯೇಲನು, “ನಿನ್ನ ಕಾಯಿಲೆಯು ವಾಸಿಯಾಗುತ್ತದೆಯೆಂದು ಎಲೀಷನು ನನಗೆ ಹೇಳಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಜಾಯೇಲನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಆಗ ಅವನು, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದ್ದಕ್ಕೆ ಹಜಾಯೇಲನು, “ನೀನು ನಿಜವಾಗಿ ಬದುಕುವೆ ಎಂದು ನನಗೆ ಹೇಳಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:14
4 ತಿಳಿವುಗಳ ಹೋಲಿಕೆ  

ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.


ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.


ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.


ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು