Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:18
21 ತಿಳಿವುಗಳ ಹೋಲಿಕೆ  

ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.


ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.


ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು