2 ಅರಸುಗಳು 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.