Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:11
16 ತಿಳಿವುಗಳ ಹೋಲಿಕೆ  

“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.


ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.


ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.


ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.


ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,


ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.


ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು