2 ಅರಸುಗಳು 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಹುತನು ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದು ಹೇಳಿದನು. ಕಾವಲುಗಾರನು ಅರಸನಿಗೆ - ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರಿಗಿ ಬರುವದು ಕಾಣಿಸುವದಿಲ್ಲ ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾಮನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿ |