Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವನು ಹೋಗಿ ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೋರಾಮನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾಮನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:19
5 ತಿಳಿವುಗಳ ಹೋಲಿಕೆ  

ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.


ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.


ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.


ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು