2 ಅರಸುಗಳು 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು. ಅಧ್ಯಾಯವನ್ನು ನೋಡಿ |