2 ಅರಸುಗಳು 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ - ಅವನನ್ನೂ ರಥದಲ್ಲಿಯೇ ಹೊಡಿಯಿರಿ ಎಂದು ಕೂಗಲು ಅವನ ಜನರು ಇಬ್ಲೆಯಾವಿುನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು. ಅಧ್ಯಾಯವನ್ನು ನೋಡಿ |