Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:37
14 ತಿಳಿವುಗಳ ಹೋಲಿಕೆ  

ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.


ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಕರ್ಮೆಲ್, ಜೀಫ್, ಯುಟ್ಟಾ,


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.


ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು