2 ಅರಸುಗಳು 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು - ಇಸ್ರಾಯೇಲ್‍ದೇವರಾದ ಯೆಹೋವನ ಮಾತನ್ನು ಕೇಳು - ಆತನು ನಿನಗೆ - ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ. ಅಧ್ಯಾಯವನ್ನು ನೋಡಿ |