Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:7
21 ತಿಳಿವುಗಳ ಹೋಲಿಕೆ  

ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.


ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.


ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,


ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು