Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಎಕ್ ವಿಶಯಾತ್ ಅಮ್ಕಾ ಅಭಿಮಾನ್ ದಿಸ್ತಾ; ಸಗ್ಳ್ಯಾ ಮಾನ್ಸಾಂಚ್ಯಾ ಮದ್ದಿ ಅನಿ ವಿಶೆಸ್ ರಿತಿನ್ ತುಮ್ಚ್ಯಾ ಮದ್ದಿ ಬೊಲ್ತಾನಾ, ಅಮ್ಚಿ ಚಾಲ್ ಪ್ರಾಮಾನಿಕ್ ಅನಿ ದೆವಾಚ್ಯಾ ಭಿಂಯಾನ್ ಭರಲ್ಲಿ ಹಾಯ್ ಮನುನ್ ಅಮ್ಚೊ ಭುತ್ತುರ್ಲೊ ಮನ್ ಅಮ್ಕಾ ಸಾಕ್ಷಿ ದಿತಾ. ಜಗಾಚೆ ಶಾನ್‍ಪಾನ್ ನ್ಹಯ್, ದೆವಾಚಿ ಕುರ್ಪಾಚ್ ಅಮ್ಚ್ಯಾ ಹ್ಯಾ ಚಾಲಿಕ್ ಪ್ರೆರನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:12
40 ತಿಳಿವುಗಳ ಹೋಲಿಕೆ  

ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;


ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು