Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ತೆನಿಚ್ ಅಮ್ಕಾ ಅಮ್ಚ್ಯಾ ವೈರ್ ಛಪ್ಪೊ ಮಾರುನ್ ಅಮಿ ಅಪ್ನಾಚೆ ಕರುನ್ ಘೆಟ್ಲಾ ಅನಿ ಅಮ್ಚ್ಯಾ ಗಾವ್ನಾರ್ ಹೊತ್ತ್ಯಾ ಆಯಾರಾಂಚೊ ಖಾತ್ರಿ ಸಾರ್ಕೊ ಪವಿತ್ರ್ ಆತ್ಮೊ ಅಮ್ಚ್ಯಾ ಮನಾತ್ನಿ ಘಾಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:22
15 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು