Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಹೋದರರೇ, ಆಸ್ಯ ಸೀಮೆಯಲ್ಲಿ ನಮಗೆ ಸಂಭವಿಸಿದ ಸಂಕಟವನ್ನು ಕುರಿತು ವಿಚಾರಿಸುತ್ತೀರೋ ಅದರಲ್ಲಿ ನಾವು ಬಲವನ್ನು ಮೀರಿದಂಥ ಅತ್ಯಧಿಕವಾದ ಭಾರದಿಂದ ಕುಗ್ಗಿಹೋಗಿ ಜೀವವುಳಿಯುವ ಮಾರ್ಗವನ್ನು ಕಾಣದವರಾದೆವೆಂಬದನ್ನು ನೀವು ತಿಳಿಯಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಭಾವಾನು ಅನಿ ಭೆನಿಯಾನು ಅಮಿ ಅಸ್ಸಿಯಾ ಮನ್ತಲ್ಯಾ ಪ್ರಾಂತ್ಯಾತ್ ಸೊಸಲ್ಲ್ಯಾ ತರಾಸಾಂಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್‍ಹಾವ್ಚೆ ಮನುನ್ ಮಾಜಿ ಆಶಾ, ಅಮ್ಕಾ ಸೊಸುಕ್ ಹೊಯ್ನಾ ತವ್ಡ್ಯಾ ಕಸ್ಟಾತ್ ಅಮಿ ಸಿರಕಲ್ಲಾವ್, ಸಾಂಗುಚೆ ಜಾಲ್ಯಾರ್ ಅಮಿ ಹುರ್‍ತಾವ್ ಮನ್ತಲೊ ಬರೊಸೊಚ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:8
13 ತಿಳಿವುಗಳ ಹೋಲಿಕೆ  

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.


ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.


ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,


ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು