Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಕ್ರಿಸ್ತನಿಗೆ ವಿಧೇಯರಾಗದಿರುವ ಯಾರನ್ನೇ ಆಗಲಿ ಶಿಕ್ಷಿಸಲು ಸಿದ್ಧರಾಗಿದ್ದೇವೆ. ಆದರೆ ಮೊಟ್ಟಮೊದಲನೆಯದಾಗಿ, ನೀವು ಪೂರ್ಣ ವಿಧೇಯರಾಗಬೇಕೆಂದು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ತುಮ್ಚ್ಯಾ ಖಾಲ್ತಿ ಮನಾಕ್ ಪುರಾ ರಿತಿನ್ ಒಪ್ಪುನ್ ದಿಲ್ಲ್ಯಾ ತನ್ನಾ ಹರ್ ಎಕ್ ಕರ್ನಿಕ್ ಶಿಕ್ಷಾ ಲಾವುಕ್ ಅಮಿ ಫಾಟಿ ಫಿಡೆ ಬಗಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:6
12 ತಿಳಿವುಗಳ ಹೋಲಿಕೆ  

ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.


ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.


ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.


ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?


ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು