2 ಕೊರಿಂಥದವರಿಗೆ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೆನಿ ಕ್ರಿಸ್ತಾಚಿ ಸೆವಕಾ? ಬುದ್ದನಸಲ್ಲ್ಯಾ ಮಾನ್ಸಾಚ್ಯಾ ಸರ್ಕೆ ಬೊಲುಲಾ ಸರ್ಕೆ ದಿಸುಕ್ ಲಾಗ್ಲಾ. ಮಿಯಾ ತೆಂಚ್ಯಾನ್ಕಿ ಜಾಸ್ತಿ ಕ್ರಿಸ್ತಾಚೊ ಸೆವಕ್, ತೆಂಚ್ಯಾನ್ಕಿ ಜಾಸ್ತಿ ಎಳಾ ಬಂದಿಖಾನ್ಯಾತ್ ಪಡ್ಲಾ; ಲೆಕ್ಕ್ ನಾ ತವ್ಡಿ ಮಾರಾ ಮಿಯಾ ಖಾಲಾ; ಕವ್ಡೆಂದಾಕಿ ಮರುನ್ ವಾಚ್ಲಾ. ಅಧ್ಯಾಯವನ್ನು ನೋಡಿ |