Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಿನ್ ದಾ ಮಾಕಾ ಟೊನ್ಯಾನಿ ಮಾರಲ್ಲೆ ಹಾಯ್ ; ಎಗ್ದಾ ಮಾಕಾ ಗುಂಡ್ಯಾನಿ ಮಾರುನ್ ಹೊಲಾ, ತಿನ್ ದಾ ಮಾಜಿ ಢೊನ್ ಫುಟ್ಲಾ; ಎಕ್ ರಾತ್ ಅನಿ ಎಕ್ ದಿಸ್ ಸಮುಂದರಾಚ್ಯಾ ಪಾನಿಯಾತ್ ಮಿಯಾ ರ್‍ಹಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:25
12 ತಿಳಿವುಗಳ ಹೋಲಿಕೆ  

ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.


ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.


ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು