Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೀಗೆ ನಾನು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಎಲ್ಲಾ ಸಭೆಗಳ ಮೇಲೆ ನನಗಿರುವ ಚಿಂತೆಯೂ ಇವುಗಳಲ್ಲಿ ಒಂದು. ನಾನು ಪ್ರತಿನಿತ್ಯ ಅವುಗಳ ಬಗ್ಗೆ ಚಿಂತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹಿ ಅನಿ ದುಸ್ರಿ ಕಸ್ಟಾ ಸೊಡುನ್ ಮಾಕಾ ಸದ್ದಿಚೆ ಕಾಮ್ ಬಿ ಹಾಯ್. ಮಟ್ಲ್ಯಾರ್, ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚ್ಯೊ ಉಸ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:28
12 ತಿಳಿವುಗಳ ಹೋಲಿಕೆ  

ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು