Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:9
16 ತಿಳಿವುಗಳ ಹೋಲಿಕೆ  

ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.


ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.


ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.


ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು