2 ಕೊರಿಂಥದವರಿಗೆ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತುಮ್ಕಾ ಬೆಟ್ ದಿವ್ಚಿ ಮನುನ್ ಮಿಯಾ ಅತ್ತಾ ತಿನ್ವೆ ಪಟಿ ತಯಾರ್ ಹೊಲಾ. ಖರೆ ಯೆಲ್ಯಾರ್ ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ಮಾಕಾ ಮನ್ ನಾ. ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಮನುನ್ ಹೊತ್ತೆ ಮಾಕಾ ಕಾಯ್ಬಿ ನಕ್ಕೊ, ಮಾಕಾ ತುಮಿ ಪಾಜೆ. ಪೊರಾನಿ ಬಾಯ್ ಬಾಬಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ ನ್ಹಯ್, ಬಾಯ್ ಬಾಬಾನಿ ಪೊರಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ. ಅಧ್ಯಾಯವನ್ನು ನೋಡಿ |