Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ತುಮ್ಚ್ಯಾ ಮದ್ದಿ ಯೆಲ್ಲ್ಯಾ ತನ್ನಾ ಮಾಜೊ ದೆವ್ ಮಾಕಾ ಅವ್ಮಾನಾತ್ ಘಾಲಿಲ್ ಕಾಯ್ ಅನಿ ಎಕ್ ಕಾಲಾತ್ ಪಾಪ್ ಕರುನ್ ಹೊತ್ತ್ಯಾ, ಅನಿ ತುಮ್ಚ್ಯೆ ಮದ್ದಿ ಸುಮಾರ್ ಜಾನಾನಿ ಅನಿಬಿ ಬುರ್ಶ್ಯಾ ರಿತಿನ್ ಚಲ್ತಲೆ .ವೆಭಿಚಾರ್ ಅನಿ ಪೊಜ್ಡೆಪಾನ್ ಸೊಡುನ್ ಜಿವನ್ ಬದ್ಲುಕ್ ಪಾವುಕ್ನಾತ್ ಮನುನ್ ರಡ್ತಲೆ ಪಡ್ತಾಕಿ ಕಾಯ್ ಮನುನ್ ಭಿಂಯೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:21
37 ತಿಳಿವುಗಳ ಹೋಲಿಕೆ  

ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.


ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.


ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.


ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ


ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು