Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ತಿನ್ಸೆ ಪಟಿ ಮಿಯಾ ತುಮ್ಚ್ಯಾಕ್ಡೆ ಯೆತಲೊ ಹಾಂವ್ " ದೊಗ್ಯಾಂಚಿ ನಾಹೊಲ್ಯಾರ್ ತಿಗಾಂಚೆ ಸಾಕ್ಷಿ ವೈನಾ ಅಪ್ಪಾದ್ ತಿರ್ಮಾನ್ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:1
11 ತಿಳಿವುಗಳ ಹೋಲಿಕೆ  

ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.


ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು