Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:11
51 ತಿಳಿವುಗಳ ಹೋಲಿಕೆ  

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.


ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.


ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.


ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.


ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು